ಕುಶಾಲನಗರ, ಮಾ. 1: ಕುಶಾಲನಗರದ ಅಬಾಕಸ್ ಸಂಸ್ಥೆ ವತಿಯಿಂದ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಖಾಸಗಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಚಿಕ್ಕ ಅಳುವಾರ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಡಾ. ಚಂದ್ರಶೇಖರ್ ಜೋಶಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಪಟ್ಟಣ ಪಂಚಾಯಿತಿ ಸದಸ್ಯ ಬಿ. ಅಮೃತರಾಜ್ ಪಾಲ್ಗೊಂಡು ಮಾತನಾಡಿದರು. ಸಂಸ್ಥೆಯ ಮುಖ್ಯಸ್ಥೆ ಕುಸುಮಾ ರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಮಕ್ಕಳಾದ ದಿಯಾಮಿಸ್ತ್ರಿ ಚಾಂಪಿಯನ್ ಆಗಿ ಹೊರ ಹೊಮ್ಮಿದರೆ, ದೀಪ್ತಿ ಸಮೃದ್ಧಿ, ಹೃಷಿಕೇಶ್, ಸಾತ್ವಿಕ್, ಯಶಿಕಾ ಮೊದಲ ಮತ್ತು ದ್ವಿತೀಯ ಬಹುಮಾನ ಗಳಿಸಿದ್ದಾರೆ. ದೇಗುಲ್ ಬೋಪಣ್ಣ, ಹಮ್ದಾ, ಧಾನ್ಯ, ಚಿನ್ಮಯಿ, ನಿಶ್ಚಿತಾ, ರಮ್ಯಶ್ರೀ, ಚಿನ್ಮಯಿ, ಯಶ್ ಬಹುಮಾನಗಳನ್ನು ಪಡೆದಿದ್ದಾರೆ ಎಂದರು. ಸಂಸ್ಥೆಯ ಕಾರ್ಯದರ್ಶಿ ಸುಖೇಶ್ ರಾಜ್ ಇದ್ದರು. ಕಾರ್ಯಕ್ರಮದಲ್ಲಿ ಭಾರತೀಯ ಸೇನೆಗೆ ಆಯ್ಕೆಯಾದ ಕುಶಾಲನಗರ ಬೈಚನಹಳ್ಳಿ ನಿವಾಸಿ ಸುಜಯ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.