ಸೋಮವಾರಪೇಟೆ, ಮಾ. 1: ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯಂತೆ ಮೇರಾ ಬೂತ್ ಸಬ್ ಸೆ ಮಜಬೂತ್ ಕಾರ್ಯಕ್ರಮದ ನೇರ ಪ್ರಸಾರ ಮತ್ತು ಸಂವಾದ ಕಾರ್ಯಕ್ರಮ ಇಲ್ಲಿನ ಮಹಿಳಾ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಕೇಂದ್ರ ಸರ್ಕಾರದ ಅಭಿವೃದ್ಧಿಶೀಲ ಕಾರ್ಯಕ್ರಮಗಳನ್ನು ಪ್ರತಿ ಮನೆಗೂ ತಲಪಿಸುವ ಕೆಲಸ ಮಾಡಬೇಕು. ಚುನಾವಣೆಯಲ್ಲಿ ಮೋದಿ ಅವರ ಕೈಬಲಪಡಿಸಬೇಕು ಎಂದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಭಾರತೀಶ್, ತಾಲೂಕು ಅಧ್ಯಕ್ಷ ಕುಮಾರಪ್ಪ, ಜಿ.ಪಂ. ಸದಸ್ಯೆ ಮಂಜುಳಾ, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸದಸ್ಯೆ ತಂಗಮ್ಮ, ಪ.ಪಂ. ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ, ಯುವ ಮೋರ್ಚಾ ಅಧ್ಯಕ್ಷ ಸುನಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.