ಶ್ರೀಮಂಗಲ, ಮಾ. 1: ಜೆ.ಸಿ.ಐ. ಪೊನ್ನಂಪೇಟೆ ಗೋಲ್ಡನ್ ಘಟಕದಿಂದ ಸಂಸ್ಥೆಯ ರಾಷ್ಟ್ರೀಯ ಕಾರ್ಯಕ್ರಮದಡಿ ಸಾಮಾಜಿಕ ಕಳಕಳಿಯಿಂದ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸಲಾಯಿತು.

ಪೊನ್ನಂಪೇಟೆ ಜೆ.ಸಿ.ಐ. ಗೋಲ್ಡನ್ ಘಟಕದ ಕಚೇರಿಯಲ್ಲಿ ಸಂಸ್ಥೆಯ ಅಧ್ಯಕ್ಷೆ ಕೊಣಿಯಂಡ ಕಾವ್ಯ ಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಲ್ಯಮಂಡೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಎಸ್.ಎನ್.ಎಲ್. ದೂರವಾಣಿ ಉದ್ಯೋಗಿ ಸುರೇಶ್ ಕುಮಾರ್, ಅಲ್ಲದೆ ಕಳೆದ 17 ವರ್ಷದಿಂದ ದಕ್ಷಿಣ ಕೊಡಗಿನ ಗ್ರಾಮೀಣ ಭಾಗದಲ್ಲಿ ಪತ್ರಕರ್ತನಾಗಿ-ಬೆಳೆಗಾರರ ಸಂಘಟನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಣ್ಣೀರ ಹರೀಶ್ ಮಾದಪ್ಪ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಜೆ.ಸಿ.ಐ. ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಮೂಕಳಮಾಡ ಅರಸು ನಂಜಪ್ಪ, ಕಾರ್ಯದರ್ಶಿ ಕೊಟ್ಟಂಗಡ ನಾಣಯ್ಯ, ಘಟಕದ ಪೂರ್ವಾಧ್ಯಕ್ಷರಾದ ಕೊಟ್ಟಂಗಡ ರಾಜಾ ಸುಬ್ಬಯ್ಯ, ಪುಳ್ಳಂಗಡ ನಟೇಶ್, ಮಾಚಂಗಡ ನಿರನ್ ಮೊಣ್ಣಪ್ಪ, ಕೊಣಿಯಂಡ ಸಂಜು ಸೋಮಯ್ಯ ಹಾಗೂ ಸದಸ್ಯರು ಹಾಜರಿದ್ದರು.