ಗೋಣಿಕೊಪ್ಪ, ಮಾ. 2 : ಕೊಡಗು ಹಿಂದೂ ಮಲೆಯಾಳಿ ಸಮಾಜ ವತಿಯಿಂದ ಏಪ್ರಿಲ್ ತಿಂಗಳಿನಲ್ಲಿ ಹಿಂದೂ ಫುಟ್‍ಬಾಲ್ ಟೂರ್ನಿ ಆಯೋಜಿಸಲಾಗಿದೆ ಎಂದು ಕೊಡಗು ಹಿಂದೂ ಮಲೆಯಾಳಿ ಸಮಾಜ ಅಧ್ಯಕ್ಷ ಶರತ್‍ಕಾಂತ್ ತಿಳಿಸಿದ್ದಾರೆ.

ಗೋಣಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏಪ್ರಿಲ್ 19 ರಿಂದ ಮೂರು ದಿನಗಳ ಕಾಲ ಟೂರ್ನಿ ನಡೆಯಲಿದ್ದು, ಕೊಡಗಿನ ಎಲ್ಲಾ ಹಿಂದೂ ಬಾಂಧವರು ಟೂರ್ನಿಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಾಕ್‍ಔಟ್ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಒಂದು ತಂಡದಲ್ಲಿ ಏಳು ಜನÀ ಆಟಗಾರರು ಪಾಲ್ಗೊಳ್ಳಬಹುದಾಗಿದೆ. ಏಪ್ರಿಲ್ 17 ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ವಿಜೇತ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳ ತಂಡಗಳಿಗೆ ಆಕರ್ಷಕ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುವದು. ಆಟಗಾರರು ಟೂರ್ನಿಯಲ್ಲಿ ಪಾಲ್ಗೊಳ್ಳಲು ಗುರುತಿನ ಚೀಟಿ ನೀಡಬೇಕಿದೆ ಎಂದರು.

ಹೆಚ್ಚಿನ ಮಾಹಿತಿಗೆ 9448448505, 9591923193 ಸಂಪರ್ಕಿಸಬಹುದಾಗಿದೆ ಎಂದರು.

ಗೋಷ್ಠಿಯಲ್ಲಿ ಸಮಾಜದ ಗೌ. ಅಧ್ಯಕ್ಷ ಬಾಸ್ಕರ್, ಖಜಾಂಜಿ ಸುಬ್ರಮಣಿ, ನಿರ್ದೇಶಕ ವೇಣುಗೋಪಾಲ್, ಟೂರ್ನಿ ಸಂಚಾಲಕ ವಿನೋದ್ ಉಪಸ್ಥಿತರಿದ್ದರು.