ಮಡಿಕೇರಿ, ಮಾ. 1: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಾಲ್ಕೂರು ಒಕ್ಕೂಟಗಳ ಸಹಕಾರದಲ್ಲಿ ತಾ.3 ರಂದು ಮಧ್ಯಾಹ್ನ 1.30 ಗಂಟೆಗೆ ಸುಳ್ಯದ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ಅರೆಭಾಷೆ ಸಾಂಸ್ಕøತಿಕ ಜನಪದ ವೈಭವ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ, ನಾಟಿ ವೈದ್ಯರಾದ ಬುಡ್ಲೆಗುತ್ತು ಪುಷ್ಪಾವತಿ ದೇವಿದಾಸ್ ಇತರರು ಪಾಲ್ಗೊಳ್ಳಲಿದ್ದಾರೆ.

ಇಂದು ಅರೆಭಾಷೆ ಸಾಹಿತ್ಯ ಸಮ್ಮೇಳನ

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಅರೆಭಾಷೆ ಸಾಹಿತ್ಯ ಸಮ್ಮೇಳನ ಮತ್ತು ಗೌಡರ ಯುವ ಸೇವಾ ಸಂಘ ಇವರ ವತಿಯಿಂದ ಅರೆಭಾಷೆ ಸಾಹಿತ್ಯ ಸಮ್ಮೇಳನವು ಸುಳ್ಯದ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ಕೂಳಂಬೆ ಪುಟ್ಟಣ್ಣ ಗೌಡ ಸಭಾಂಗಣ ಗೌಡ ಸಮುದಾಯ ಭವನ ಕೊಡಿಯಲ್‍ಬೈಲ್ ಇಲ್ಲಿ ತಾ.2 ರಂದು (ಇಂದು) ನಡೆಯಲಿದೆ.

ಬೆಳಗ್ಗೆ 9 ಗಂಟೆಗೆ ಮೆರವಣಿಗೆ ನಡೆಯಲಿದೆ. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ.ರೇಣುಕಾಪ್ರಸಾದ್ ಕೆ.ವಿ, ಸುಳ್ಯ ತಾ.ಪಂ. ಅಧ್ಯಕ್ಷರು ಚನಿಯ ಕಲ್ತಡ್ಕ ಮತ್ತು ಜಿ.ಪಂ.ಸದಸ್ಯರಾದ ಹರೀಶ್ ಇತರರು ಪಾಲ್ಗೊಳ್ಳಲಿದ್ದಾರೆ.

ನಂತರ ಬೆಳಗ್ಗೆ 10.30 ಗಂಟೆಗೆ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾಸಾಯನಿಕ ಗೊಬ್ಬರ ಮತ್ತು ಅಂಕಿ- ಅಂಶಗಳ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ ಖಾದರ್, ಮುಖ್ಯ ಅತಿಥಿಗಳಾಗಿ ಶಾಸಕ ಎಸ್.ಅಂಗಾರ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಇತರರು ಪಾಲ್ಗೊಳ್ಳಲಿದ್ದಾರೆ.