ನಾಪೋಕ್ಲು, ಮಾ. 1: ಕುಶಾಲನಗರದ ಕನ್ನಿಕ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ವಾರ್ಷಿಕ ಮಹಾಸಭೆ ತಾ. 2 ರಂದು (ಇಂದು) ನಡೆಯಲಿದೆ. ಸಂಘದ ಅಧ್ಯಕ್ಷ ಎನ್.ಕೆ. ಪ್ರಭು ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕಾರ್ಯಾಗಾರ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.