ಮೂರ್ನಾಡು, ಮಾ. 1: ಮೂರ್ನಾಡು ಪದವಿ ಕಾಲೇಜಿನಲ್ಲಿ ತಾ. 9ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಪೋಷಕರ ಹಾಗೂ ಉಪನ್ಯಾಸಕರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಈ ಸಭೆ ಮುಖ್ಯವಾಗಿದ್ದು, ಪೋಷಕರು ತಪ್ಪದೇ ಹಾಜರಾಗಬೇಕಾಗಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಟ್ಟಡ ಪೂವಣ್ಣ ತಿಳಿಸಿದ್ದಾರೆ.