ಮಡಿಕೇರಿ, ಮಾ. 1: ಮಂಗಳೂರು ವಿಶ್ವವಿದ್ಯಾನಿಲಯ, ಕೊಡವ ಸಾಂಸ್ಕøತಿಕ ಅಧ್ಯಯನ ಪೀಠ ವತಿಯಿಂದ ತಾ. 5 ರಂದು ಬೆಳಗ್ಗೆ 10.30 ಗಂಟೆಗೆ ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಚಾರೋಪನ್ಯಾಸ ಮಾಲಿಕೆ ಕಾರ್ಯಕ್ರಮ ನಡೆಯಲಿದೆ.
ವಕೀಲರಾದ ಕೆ.ಎಂ.ಕುಂಞ ಅಬ್ದುಲ್ಲಾ, ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕಾವೇರಿ ಪ್ರಕಾಶ್, ಬೆಂಗಳೂರು ಆರ್.ಬಿ.ಎ.ಎನ್.ಎಂ. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ವಿ.ಅವಿನಾಶ್ ಇತರರು ಪಾಲ್ಗೊಳ್ಳಲಿದ್ದಾರೆ.