ಸೋಮವಾರಪೇಟೆ, ಮಾ. 1: ತಾಲೂಕಿನ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಗಂದೂರು ಬಿ ಗ್ರಾಮದ ಪರಿಶಿಷ್ಟ ಪಂಗಡ ಕಾಲೋನಿಯ 11 ಮಂದಿ ಜೇನುಕುರುಬ ನಿವಾಸಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿಗೆ ಜಿ.ಪಂ. ಸದಸ್ಯೆ ಕುಮುದ ಧರ್ಮಪ್ಪ ಚಾಲನೆ ನೀಡಿದರು.
ಮೂಲ ನಿವಾಸಿ ಅಭಿವೃದ್ಧಿ ಯೋಜನೆಯಡಿ 11 ಫಲಾನುಭವಿಗಳಿಗೆ ಮನೆ ನಿರ್ಮಿಸಲು ಉದ್ದೇಶಿಸಲಾಗಿದ್ದು, ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಕುಮುದಾ ಅವರು ತಿಳಿಸಿದರು. ಈ ಸಂದರ್ಭ ಗ್ರಾ.ಪಂ. ಸದಸ್ಯ ಗೌತಮ್ ಶಿವಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಹೊಸತೋಟ ಸಲೀಂ, ಪ್ರಮುಖರಾದ ಬಸಪ್ಪ, ರವಿ, ಜನಾರ್ಧನ್ ಸೇರಿದಂತೆ ಇತರರು ಹಾಜರಿದ್ದರು.