ಕುಶಾಲನಗರ, ಮಾ. 1: ಕುಶಾಲನಗರ ಕೇಂದ್ರವಾಗಿಸಿಕೊಂಡು ಕಾವೇರಿ ತಾಲೂಕು ಘೋಷಣೆ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕಾವೇರಿ ತಾಲೂಕು ಹೋರಾಟ ಸಮಿತಿಯ ಪ್ರಮುಖರು ಸನ್ಮಾನಿಸಿ ಗೌರವಿಸಿದರು. ಬಸವನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಸಮಿತಿಯ ಪ್ರಮುಖರಾದ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಕೇಂದ್ರ ಹಾಗೂ ಸ್ಥಾನೀಯ ಸಮಿತಿಯ ಪ್ರಮುಖರು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.
ಇದೇ ಸಂದರ್ಭ ಪೊನ್ನಂಪೇಟೆ ತಾಲೂಕು ರಚನೆ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯ ಪ್ರಮುಖರಾದ ಅರುಣ್ ಮಾಚಯ್ಯ ಅವರ ನೇತೃತ್ವದಲ್ಲಿ ಸಮಿತಿ ಸದಸ್ಯರು ಮುಖ್ಯಮಂತ್ರಿಗಳನ್ನು ಸನ್ಮಾನಿಸಿದರು. ಈ ಸಂದರ್ಭ ಹೋರಾಟ ಸಮಿತಿಯ ಕೇಂದ್ರ ಹಾಗೂ ಸ್ಥಾನೀಯ ಸಮಿತಿಯ ಪ್ರಮುಖರು ಇದ್ದರು.