ಕೂಡಿಗೆ, ಮಾ. 1 : ಮುಳ್ಳುಸೋಗೆ ಗ್ರಾಮ ಪಂಚಾಯತಿಯ ಜನತಾ ಕಾಲೋನಿಯ ರೂ. 9 ಲಕ್ಷ ವಚ್ಚದ ನೂತನ ಕಾಂಕ್ರೀಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟನೆ ನೆರವೇರಿಸಿದರು. ನಂತರ ಮಾತನಾಡುತ್ತಾ ಈ ಸಾಲಿನಲ್ಲಿ ಗ್ರಾಮಾಂತರ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನೇಕ ರಸ್ತೆಗಳನ್ನು ಕಾಂಕ್ರೀಟ್ ಮಾಡುವ ಮೂಲಕ ಗ್ರಾಮಸ್ಥರಿಗೆ ಅನುಕೂಲವಾಗುವ ರೀತಿ ಕ್ರಮ ಕೃಗೊಳ್ಳಲಾಗುತ್ತಿದೆ ಎಂದರು. ಜಿಲ್ಲಾ ಪಂಚಾಯತ್ ಸದಸ್ಯೆ ಮಂಜಳಾ ಮಾತನಾಡುತ್ತಾ ಗ್ರಾಮದಲ್ಲಿ ಉಪರಸ್ತೆಗಳ ದುರಸ್ತಿ ಹಾಗೂ ಡಾಂಬರೀಕರಣ ಮಾಡುವ ಮೂಲಕ ರೈತ ಜಮೀನಿನ ಸಂಪರ್ಕ ರಸ್ತೆಗೆ ಸಹಕಾರಿ ಆಗುವದು ಎಂದರು. ಗ್ರಾಮ ಪಂಚಾಯತಿ ಸದಸ್ಯರಾದ ಶಿವಾನಂದ, ಸಂತೋಷ, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷೆ ಜಯಮ್ಮ, ಗಾಮಸ್ಥರಾದ ಕುಮಾರ, ಸಂಗೀತ, ರೇಖಾ, ಮಹೇಶ್, ಮೀನಾಕ್ಷಿ, ಸೇರಿದಂತೆ ಮೊದಲಾದವರು ಹಾಜರಿದ್ದರು.