ವೀರಾಜಪೇಟೆ, ಮಾ. 3: ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ತಾ. 6 ರಂದು ವಿಶ್ವವಿದ್ಯಾನಿಲಯ ಮಟ್ಟದ ಕೊಡಗಿನ ಇತಿಹಾಸ ಅದ್ಯಯನದಲ್ಲಿ ಪುರಾತತ್ವಾ ಆಧಾರಗಳ ಮಹತ್ವ ಎಂಬ ವಿಷಯದ ಬಗ್ಗೆ ಒಂದು ದಿನದ ವಿಚಾರ ಗೋಷ್ಠಿಯನ್ನು ಆಯೋಜಿಸಲಾಗಿದೆ.
ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ.ಪೆನ್ನೆಕರ್ ನೆರವೇರಿಸಲಿದ್ದಾರೆ.
ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರೊಪೇಸರ್ ಡಾ. ಗಣಪತಿ ಗೌಡ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಟಿ.ಕೆ. ಬೋಪಯ್ಯ ವಹಿಸಲಿದ್ದಾರೆ.