ಮಡಿಕೇರಿ, ಮಾ. 3: ಕಳೆದ ಫೆ. 25 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರೂ. 23.29 ಕೋಟಿ ಅಂದಾಜು ವೆಚ್ಚದಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು, ಮೇಟಿಕುಪ್ಪೆ, ಹುಣಸೂರು ವನ್ಯಜೀವಿ ವಿಭಾಗಗಳ ವ್ಯಾಪ್ತಿಯಲ್ಲಿ ರೈಲ್ವೆಕಂಬಿಗಳನ್ನು ಉಪಯೋಗಿ ಬ್ಯಾರಿಕೇಡ್ ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಆ ಮೂಲಕ ಈ ಭಾಗಗಳಲ್ಲಿ ಕಾಡಾನೆ ಹಾವಳಿ ತಡೆಗೆ ಕ್ರಮ ವಹಿಸಲಾಗುತ್ತಿದೆ.
ಹಾಸನಕ್ಕೆ ನೀರು: ಇನ್ನು ಸೋಮವಾರಪೇಟೆ ತಾಲೂಕಿನ ಕಟ್ಟೇಪುರ ಗ್ರಾಮದ ಬಳಿ ಹೇಮಾವತಿ ನದಿಯಿಂದ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ, ಕೊಣನೂರು, ದೊಡ್ಡಮಗ್ಗೆ ಮೊದಲಾದೆಡೆಯ 150 ಕೆರೆಗಳು ಹಾಗೂ 50 ಕಟ್ಟೆಗಳಿಗೆ ಕುಡಿಯುವ ನೀರು ಶೇಖರಿಸಲು ರೂ. 190 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ. ಮಾತ್ರವಲ್ಲದೆ ಸಂಪುಟ ಸಭೆಯಲ್ಲಿ ಇತರ ಬೇರೆ ಬೇರೆ ಜಿಲ್ಲೆಗಳ ಅಭಿವೃದ್ಧಿ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.