ಮಡಿಕೇರಿ, ಮಾ. 5 : ಬಾಲಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಿಶೇಷ ಮಕ್ಕಳ ಪುನರ್ವಸತಿ ಕೇಂದ್ರಗಳ ಸಹಭಾಗಿತ್ವದಲ್ಲಿ ವಿಶೇಷ ಮಕ್ಕಳ ಉತ್ಸವ ಕಾರ್ಯಕ್ರಮವು ತಾ. 6 ರಂದು (ಇಂದು) ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ಓಂಕಾರ ಸದನದಲ್ಲಿ ನಡೆಯಲಿದೆ. ವಿಶೇಷ ಮಕ್ಕಳಿಗಾಗಿ ವಿಶೇಷ ಸಾಂಸ್ಕøತಿಕ ಕಾರ್ಯಕ್ರಮಗಳು, ಗ್ರಾಮೀಣ ಆಟಗಳು ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.