ಸುಂಟಿಕೊಪ್ಪ, ಮಾ. 6: ಕಂಬಿಬಾಣೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೆ.ಬಿ. ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿ ಸುಂಟಿಕೊಪ್ಪದ ಕೃಷಿ ಅಧಿಕಾರಿ ಬೋಪಯ್ಯ ಅವರ ಉಪಸ್ಥಿತಿಯಲ್ಲಿ ಅತ್ತೂರು-ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ 2018ರ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದ ತೀವೃ ಹಾನಿಗೊಳಗಾಗಿರುವ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ವಿಪತ್ತು ನಿರ್ವಹಣಾ ಯೋಜನೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಪ್ರಾಥಮಿಕ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ, ತಾಲೂಕು ಪಂಚಾಯಿತಿ ಸದಸ್ಯ ವಿಜು ಚಂಗಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಯುನೆಸೆಫ್ ಪದಾಧಿಕಾರಿಗಳು ಮತ್ತು ಇತರ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.