ಮಡಿಕೇರಿ, ಮಾ. 6: 2019 ಮೇ ತಿಂಗಳಿನಲ್ಲಿ ನಡೆಯಲಿರುವ ಸಂಗೀತ-ನೃತ್ಯ ಮತ್ತು ತಾಳವಾದ್ಯ ಪರೀಕ್ಷೆಗಳಿಗೆ ಅಭ್ಯರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ತಾ. 15 ಅಂತಿಮ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಮುಖ್ಯ ಅಧೀಕ್ಷಕರನ್ನು ಸಂಪರ್ಕಿಸುವದು. ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯುತ್ತಿ ರುವದರಿಂದ ಮಧ್ಯಾಹ್ನ 2 ಗಂಟೆ ನಂತರ ಅರ್ಜಿಯನ್ನು ಪಡೆಯ ಬಹುದಾಗಿದೆ. ವಿವರಕ್ಕೆ ಮುಖ್ಯ ಅಧೀಕ್ಷಕರ ದೂರವಾಣಿ ಸಂಖ್ಯೆ: 7259558737 ಸಂಪರ್ಕಿಸಬಹುದು.