ಮಡಿಕೇರಿ, ಮಾ. 5: ಕೆ. ನಿಡುಗಣೆ ಗ್ರಾಮ ಪಂಚಾಯಿತಿಯಲ್ಲಿ ಕರ ವಸೂಲಾತಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀಟಾ ಮುತ್ತಣ್ಣ ಮಾತನಾಡಿ, ಪ್ರತಿಯೊಬ್ಬರೂ ಪಂಚಾಯಿತಿಗೆ ಕರ ಪಾವತಿ ಮಾಡಿ ಪಂಚಾಯ್ತಿಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಚುನಾವಣೆ ಹತ್ತಿರ ಆಗುತ್ತಿರುವದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದರÀು.