ಮಂಗಳೂರು, ಮಾ. 5: ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಅವರು ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಧನಂಜಯ್ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಧನಂಜಯ ಕುಮಾರ್ ಈ ಹಿಂದೆ ಕೊಡಗಿನ ಸಂಸದರಾಗಿ ಕಾರ್ಯನಿರ್ವಹಿಸಿದ್ದರು. ಧನಂಜಯಕುಮಾರ್ ನಿಧನಕ್ಕೆ ಮಡಿಕೇರಿ ನಗರ ಬಿ.ಜೆ.ಪಿ. ಸಂತಾಪ ಸೂಚಿಸಿರುವದಾಗಿ ಅಧ್ಯಕ್ಷ ಮಹೇಶ್ ಜೈನಿ ತಿಳಿಸಿದ್ದಾರೆ.