ಮಡಿಕೇರಿ, ಮಾ. 6 : ಮಡಿಕೇರಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ರಾಜಾಸೀಟ್ ಫೀಡರ್ನಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ರಾಜಾಸೀಟ್, ಹೊಸ ಬಡಾವಣೆ, ಇಂದಿರಾನಗರ, ಚಾಮುಂಡೇಶ್ವರಿನಗರ ಡೈರಿ ಫಾರಂ, ಎಫ್ಎಂಸಿ, ಗಾಳಿಬೀಡು, ಕಾಲೂರು, ಕ್ಲಬ್ ಮಹೇಂದ್ರ, ಒಂದನೇ ಮೊಣ್ಣಂಗೇರಿ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇೀಖರ್ ತಿಳಿಸಿದ್ದಾರೆ.