ಮಡಿಕೇರಿ, ಮಾ. 7: ಕೊಡಗು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ತಾ. 9 ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಈ ಅದಾಲತ್ನಲ್ಲಿ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗುವಂತಹ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವದು.
ಹೆಚ್ಚಿನ ಮಾಹಿತಿಗೆ ಸಮೀಪದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ತಿಳಿಸಿದ್ದಾರೆ.