ಮಡಿಕೇರಿ, ಮಾ. 8: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 2017ನೇ ಸಾಲಿನ ವನ್ಯಪ್ರಾಣಿಗಳ ಕುರಿತ ಅತ್ಯುತ್ತಮ ಲೇಖನಕ್ಕೆ ಆರ್.ಎಲ್. ವಾಸುದೇವ್ ಪ್ರಶಸ್ತಿಗೆ ಭಾಜನರಾಗಿದ್ದ ಕನ್ನಡಪ್ರಭ ಕೊಡಗು ಜಿಲ್ಲಾ ವರದಿಗಾರ ವಿಘ್ನೇಶ್ ಎಂ. ಭೂತನಕಾಡು ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಮಠದಲ್ಲಿ ಶನಿವಾರ ನಡೆದ ಪತ್ರಕರ್ತರ 34ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಶಸ್ತಿ ವಿತರಣೆ ಮಾಡಿದರು.