ಮಡಿಕೇರಿ, ಮಾ. 8: ಅಂಚೆ ಅದಾಲತ್‍ನ ಮುಂದಿನ ಸಭೆಯು ತಾ. 11 ರಂದು ಬೆಳಿಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ಅಂಚೆ ಅದಾಲತ್ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ತಾ. 11 ರೊಳಗೆ ತಲಪುವಂತೆ ಕಳುಹಿಸಲು ಕೋರಿದೆ. 11 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.