ಸೋಮವಾರಪೇಟೆ, ಮಾ. 7: ಇಲ್ಲಿನ ಮಹಿಳಾ ಸಹಕಾರ ಸಂಘದ ವತಿಯಿಂದ ತಾ. 8 ರಂದು (ಇಂದು) ಮಹಿಳಾ ದಿನಾಚರಣೆ ಏರ್ಪಡಿಸಲಾಗಿದೆ.

ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಆಲೂರುಸಿದ್ದಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಭಾರತಿ ಚಂದ್ರಶೆಟ್ಟಿ ಪಾಲ್ಗೊಳ್ಳಲಿದ್ದಾರೆ

*ಸೋಮವಾರಪೇಟೆ, ಮಾ. 7: ಮಹಿಳಾ ದಿನಾಚರಣೆ ಪ್ರಯುಕ್ತ ಮಾ. 8 ರಂದು (ಇಂದು) ಇಲ್ಲಿನ ಪುಷ್ಪಗಿರಿ ಜೇಸಿಐ ಸಂಸ್ಥೆಯ ವತಿಯಿಂದ ಚೆನ್ನಬಸಪ್ಪ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಬಿ.ಜಿ. ಪುರುಷೋತ್ತಮ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್. ನಾಗರಾಜಯ್ಯ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಉಪಸ್ಥಿತರಿರುವರು.