ಸುಂಟಿಕೊಪ್ಪ, ಮಾ. 7: ಕೊಡಗು ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ರಾಜೀವ್ ಗಾಂಧಿ ಸೇವಾ ಕಟ್ಟಡ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮವು ತಾ. 8 ರಂದು (ಇಂದು) ಮಾರುಕಟ್ಟೆ ಆವರಣದಲ್ಲಿ ನಡೆಯಲಿದೆ.
ಶಂಕುಸ್ಥಾಪನೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಮೈಸೂರು ಲೋಕಸಭಾ ಸದಸ್ಯ ಪ್ರತಾಪಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್‍ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ ಮತ್ತಿತರರು ಭಾಗವಹಿಸಲಿದ್ದಾರೆ.