ಮಡಿಕೇರಿ, ಮಾ. 7: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ನಾಪೋಕ್ಲು ಹೋಬಳಿ ಪ್ರದೇಶದಲ್ಲಿ ಸ್ವಂತ ಮನೆ ಹೊಂದಿರುವ ಸಾರ್ವಜನಿಕರಿಗೆ 100 ಜನ ತಾರಸಿ ತೋಟಕ್ಕೆ ತರಬೇತಿ ಹಮ್ಮಿಕೊಳ್ಳಲಾಗುವದು.

ಆಸಕ್ತಿಯುಳ್ಳವರು ತಾ. 11 ರವರೆಗೆ ನಾಪೋಕ್ಲು ರೈತ ಸಂಪರ್ಕ ಕೇಂದ್ರದಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಕೋರಿದೆ. ಹೆಸರನ್ನು ನೋಂದಾಯಿಸಿಕೊಳ್ಳುವಾಗ ಪಾಸ್ ಪೋರ್ಟ್ ಅಳತೆಯ ಫೋಟೋ, ಆಧಾರ್ ಕಾರ್ಡ್ ನಕಲು ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗುವ ಫಾರಂ ನಂ. 3, ಕಂದಾಯ ರಶೀದಿ, ವಿದ್ಯುಚ್ಛಕ್ತಿ ಬಿಲ್ಲಿನ ನಕಲು ದಾಖಲಾತಿಗಳನ್ನು ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕೋರಿದ್ದಾರೆ.