ಮಡಿಕೇರಿ, ಮಾ. 7: ಕಾಲೇಜು ಶಿಕ್ಷಣ ಇಲಾಖೆ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತ್ತು ಸುಳ್ಯ ಕೆವಿಜಿ ಕಾನೂನು ಕಾಲೇಜು ಇವರ ಸಹಯೋಗದಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿರುವ ಮಾದರಿ ನ್ಯಾಯಾಲಯ ಕಾರ್ಯಕ್ರಮವು ತಾ.9 ರಂದು ಬೆಳಗ್ಗೆ 10 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ವೀರಾಜಪೇಟೆ ಸಿವಿಲ್ ಕೋರ್ಟ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಯಪ್ರಕಾಶ್ ಡಿ.ಆರ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ, ವೀರಾಜಪೇಟೆ ವಕೀಲ ಎಂ.ಎಂ. ಪೂವಣ್ಣ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಕೆ. ಬೋಪಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.