ಗೋಣಿಕೊಪ್ಪ ವರದಿ, ಮಾ. 8 : ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಂಘ ಅಸ್ತಿತ್ವಕ್ಕೆ ತರುವ ನಿಟ್ಟಿನಲ್ಲಿ ಮಾರ್ಚ್ 10 ರಂದು ಬೆಳಗ್ಗೆ 9.30 ಕ್ಕೆ ಶಾಲೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಈ ಶಾಲೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಪಾಲ್ಗೊಂಡು ಹಳೆಯ ವಿದ್ಯಾರ್ಥಿ ಸಂಘ ಚಾಲನೆ ತರುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವದು ಎಂದು ಶಾಲಾ ಮುಖ್ಯ ಶಿಕ್ಷಕಿ ಎಂ.ಎ. ಶೋಫಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.