ಮಡಿಕೇರಿ, ಮಾ. 7: ಕೊಡಗು ಜಿಲ್ಲೆಯ ಮಾಜಿ ಸೈನಿಕರ ಹಾಗೂ ಅವರ ಅವಲಂಬಿತರ ಕುಂದು ಕೊರತೆಗಳ ಬಗ್ಗೆ ಚರ್ಚಿಸುವ ಸಲುವಾಗಿ ತಾ. 15 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಈ ಸಭೆಗೆ ಕೊಡಗು ಜಿಲ್ಲಾ ವ್ಯಾಪ್ತಿಯ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಭಾಗವಹಿಸುವಂತೆ ಕೋರಿದೆ. ಈ ಸಭೆಯಲ್ಲಿ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಲು ಹಾಗೂ ಸೂಕ್ತ ಕ್ರಮ ಕೈಗೊಳ್ಳುವ ಸಲುವಾಗಿ ತಮ್ಮ ನಿವೇದನೆ ಅಥವಾ ಮನವಿಗಳನ್ನು ಲಿಖಿತ ರೂಪದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ ತಾ. 10 ರೊಳಗೆ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.