ಮಡಿಕೇರಿ, ಮಾ.7 : ನಡೆದಾಡುವ ದೇವರೆಂದೇ ಕರೆಯಲ್ಪಡುವ, ಇತ್ತೀಚೆಗೆ ಲಿಂಗೈಕ್ಯರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ತಾ.10ರಂದು ನಗರದ ಮಹದೇವಪೇಟೆಯಲ್ಲಿರುವ ಶ್ರೀಬಸವೇಶ್ವರ ದೇವಾಲಯ ಸಮಿತಿ ವತಿಯಿಂದ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಕಾರ್ಯದರ್ಶಿ ಜಗದೀಶ್ ಅವರು, ಅಂದು ಬೆಳಗ್ಗೆ 9ಗಂಟೆಗೆ ಬಸವೇಶ್ವರ ದೇವಾಲಯ ದಿಂದ ಹಳೆ ಬಸ್ಸ್ಟಾಂಡ್ವರೆಗೆ ಸ್ವಾಮೀಜಿಯವರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ನಂತರ ರಾಣಿಪೇಟೆ ಯಲ್ಲಿರುವ ಗೆಜ್ಜೆಸಂಗಪ್ಪ ಕೆಂಚಮ್ಮ ಅನುಭವ ಮಂಟಪದಲ್ಲಿ 10.30ರಿಂದ ಸಭಾಕಾರ್ಯಕ್ರಮ ಆಯೋಜಿಸ ಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದು, ತುಮಕೂರು ಸಿದ್ಧಗಂಗಾ ಮಠದ ಶ್ರೀಸಿದ್ಧಗಂಗಾ ಕನ್ನಡ ಪಂಡಿತ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಪಿ.ಎಸ್.ನಿರಂಜನ್ ಅವರು ಶ್ರೀಗಳಿಗೆ ನುಡಿನಮನ ಅರ್ಪಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಎಂ.ಪಿ. ಸುನಿಲ್ಸುಬ್ರಮಣಿ, ವೀಣಾಅಚ್ಚಯ್ಯ, ಮಾಜಿ ಸಚಿವ ಎಂ.ಸಿ.ನಾಣಯ್ಯ, ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ, ರಾಜ್ಯ ಸರಕಾರದ ಅಭಿಯೋಜಕ ಎಚ್.ಎಸ್.ಚಂದ್ರಮೌಳಿ, ಜಿಲ್ಲಾಧಿಕಾರಿ ಅನೀಸ್ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಪಾಲ್ಗೊಳ್ಳಲಿದ್ದು, ಮಧ್ಯಾಹ್ನ 12.30ರಿಂದ ಅನ್ನದಾಸೋಹ ನಡೆಯಲಿದೆ ಎಂದು ಜಗದೀಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಬಿ.ಎಸ್.ರುದ್ರಪ್ರಸನ್ನ, ಉಪಾಧ್ಯಕ್ಷ ಎಸ್.ಎಂ.ದೇವರಾಜ್, ಸದಸ್ಯರು ಗಳಾದ ಗುರುರಾಜ್, ಕುಮಾರ್ ಹಾಗೂ ಚೇತನ್ ಉಪಸ್ಥಿತರಿದ್ದರು.