ಸೋಮವಾರಪೇಟೆ, ಮಾ. 9: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2018-2023ನೇ ಅವಧಿಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸದಸ್ಯತ್ವ ಶುಲ್ಕ ಪಾವತಿಸಿರುವ ಮತದಾರರ ಇಲಾಖಾವಾರು ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಿದ್ದು, ನಿಗದಿತ ಅವಧಿಯಲ್ಲಿ ಹೆಚ್‍ಆರ್ ಎಂಎಸ್ ಅಥವಾ ನೇರವಾಗಿ ಹಣ ಪಾವತಿಸಿರುವವರು ಹೆಸರು ಬಿಟ್ಟು ಹೋಗಿದ್ದಲ್ಲಿ ತಾ. 11 ರೊಳಗೆ ಸೂಕ್ತ ದಾಖಲಾತಿಗಳೊಂದಿಗೆ ಸಂಜೆ 5 ಗಂಟೆಯ ನಂತರ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಂಘದ ಅಧ್ಯಕ್ಷ ಪ್ರಸನ್ನಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9008642134, 9591310413 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.