ಹೆಬ್ಬಾಲೆ, ಮಾ. 9 : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕ, ಕದಳಿ ಮಹಿಳಾ ವೇದಿಕೆ ಕೊಡಗು, ಗ್ರಾಮ ಪಂಚಾಯಿತಿ, ಶ್ರೀ ಮಂಟಿಗಮ್ಮ ಸೇವಸ್ಥಾನ ಸಮಿತಿ, ಅಕ್ಕಮಹಾದೇವಿ ಮಹಿಳಾ ಸಮಾಜ, ಸ್ತ್ರೀಶಕ್ತಿ ಸಂಘಗಳ ಸಂಯುಕ್ತಾಶ್ರಯದಲ್ಲಿ ಶಿರಂಗಾಲ ಉಮಾಮಹೇಶ್ವರ ದೇವಸ್ಥಾನದ ಆವÀರಣದಲ್ಲಿ ಶನಿವಾರ ಜಿಲ್ಲಾಮಟ್ಟದ ಸ್ತ್ರೀ ಅಸ್ಮಿತೆ ಮತ್ತು ವಚನ ಕ್ರಾಂತಿ ಚಿಂತನಾ ಗೋಷ್ಠಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಸವಪಟ್ಟಣದ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಸಮಾಜದಲ್ಲಿ ಮಹಿಳೆಗೆ ವೈಶಿಷ್ಟಪೂರ್ಣವಾದ ಸ್ಥಾನಮಾನವನ್ನು ನೀಡಲಾಗಿದೆ. ಆದರೂ ಮಹಿಳೆಯನ್ನು ಅಸ್ಪøಶ್ಯತೆಯಿಂದ ಕಾಣುವಂತ ಒಂದು ವರ್ಗ ಕೂಡ ನಮ್ಮ ಮಧ್ಯೆ ಇರುವದು ವಿಷಾದಕರ ಎಂದರು.

ಮಹಿಳೆಯರು ಸಾಮಾಜಿಕ ಜವಬ್ದಾರಿಯನ್ನು ಅರಿತು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಸನಾತನ ಧರ್ಮವನ್ನು ತಮ್ಮ ಜೀವನದಲ್ಲಿ ಪಾಲಿಸುವ ಮೂಲಕ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸಲಹೆ ನೀಡಿದರು.

ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿ, ಇಂದಿನ ಆಧುನಿಕ ಯುಗ ಅನುಕರಣೀಯ ಲೋಕವಾಗಿದ್ದು, ತಮ್ಮಗೆ ಜನ್ಮಕೊಟ್ಟ ತಂದೆ ತಾಯಿಗಳು ಆದರ್ಶವಾಗುವ ಬದಲಿಗೆ ಈಗಿನ ಮಕ್ಕಳಿಗೆ ಕ್ರಿಕೆಟ್ ಆಟಗಾರರು ಹಾಗೂ ಸಿನಿಮಾ ನಟರು ಆದರ್ಶರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಮಹಿಳೆಯರು ಜಾಗೃತರಾಗುವ ಮೂಲಕ ಸ್ವಾಭಿಮಾನದ ಬದುಕನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಮಹಿಳೆಯರು ತಮ್ಮ ಸಂಸಾರದ ಹೊಣೆಯನ್ನು ಸಂಪೂರ್ಣವಾಗಿ ನಿಭಾಯಿಸುತ್ತಿದ್ದರೂ ಅವರ ಬೇಡಿಕೆ ಮನ್ನಣೆ ದೊರೆಯುತ್ತಿಲ್ಲ ಎಂದರು.

ಈ ಸಂದರ್ಭ ಶಿರಂಗಾಲ ಶ್ರೀ ಮಂಟಿಗಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಕುಮುದಾ ಧರ್ಮಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.ಮಹೇಶ್, ತಾಲೂಕು ಘಟಕದ ಅಧ್ಯಕ್ಷ ಪಿ.ಮಹಾದೇವಪ್ಪ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಲೇಖನಾ ಧಮೇರ್ಂದ್ರ, ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಶನಿವಾರಸಂತೆಯ ಕೆ.ಬಿ.ಹಾಲಪ್ಪ ಅಕ್ಕಮಹಾದೇವಿ ಮಹಿಳಾ ಸಮಾಜದ ಅಧ್ಯಕ್ಷೆ ಪಾರ್ವತಮ್ಮ, ಕುಶಾಲನಗರ ಪತ್ರಕರ್ತರ ಸಂಘದ ಅಧ್ಯಕ್ಷ ರಘುಹೆಬ್ಬಾಲೆ, ಗ್ರಾ.ಪಂ.ಅಧ್ಯಕ್ಷ ಎನ್.ಎಸ್.ರಮೇಶ್, ದೇವಸ್ಥಾನ ಸಮಿತಿ ಕಾರ್ಯದರ್ಶಿ ಸಿ.ಎನ್.ಲೋಕೇಶ್ ಉಪಸ್ಥಿತರಿದ್ದರು. ಮಹೇಶ್ ಸ್ವಾಗತಿಸಿದರು. ನಿರ್ಮಲಶಿವಲಿಂಗ ವಂದಿಸಿದರು. ಶಿಕ್ಷಕಿ ಎಂ.ಪಿ.ಲಿಯೋನಾ ನಿರೂಪಿಸಿದರು.

ವಚನ ಕ್ರಾಂತಿ ವಿಚಾರಗೋಷ್ಠಿ : ಲಿಂಗ ಸಮಾನತೆ ಕುರಿತು ಶಾಸನ ರಚನೆ ಕಷ್ಟಕರವಾಗಿದ್ದು, ಇಂದಿಗೂ ಲಿಂಗಸಮಾನತೆ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಪ್ರಧಾನ ವ್ಯವಸ್ಥಾಪಕಿ ಸೂದನ ರತ್ನಾವತಿ ಪೂಣಚ್ಚ ಹೇಳಿದರು.

ವಿಚಾರ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜಕೀಯ ಕ್ಷೇತ್ರದಲ್ಲಿ ಮಹಿಳೆಗೆ ಶೇ.33 ಮೀಸಲಾತಿಯನ್ನು ಕಲ್ಪಿಸಿದೆ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಇಲ್ಲ. ಆದರೂ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಪುರುಷನಿಗೆ ಸಮಾನಾಗಿ ಮೀಸಲಾತಿ ಇಲ್ಲದೆಯೇ ಸಾಧನೆ ಮಾಡಿ ತೋರಿಸಿದ್ದಾರೆ ಎಂದರು. ದೇಶದ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ, ವಿಜ್ಞಾನ ಕ್ಷೇತ್ರದಲ್ಲಿ ಕಲ್ಪನಾ ಚಾವ್ಲಾ ಸೇರಿದಂತೆ ಅನೇಕ ಮಹಿಳೆಯರು ನಮ್ಮ ಮುಂದೆ ಉದಾರಣೆಯಾಗಿದ್ದಾರೆ ಎಂದರು.

ಕುಶಾಲನಗರ ಅಕ್ಕನ ಬಳಗದ ಅಧ್ಯಕ್ಷೆ ಕಮಲ ಉದಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪೂರ್ಣಿಮಾ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾಡಿಸೋಜಾ, ಅಕ್ಕಮಹಾದೇವಿ ಮಹಿಳಾ ಸಮಾಜದ ಕಾರ್ಯದರ್ಶಿ ರೇಣುಕಾ ರವಿ, ಕೊಡ್ಲಿಪೇಟೆ ತಾ.ಪಂ.ಮಾಜಿ ಸದಸ್ಯೆ ಮಮತಾ ಸತೀಶ್ ಉಪಸ್ಥಿತರಿದ್ದರು. ವೀರಾಜಪೇಟೆ ಶೃತಿ ಸ್ವಾಗತಿಸಿದರು.ಶಿಕ್ಷಕಿ ಎಸ್.ಕೆ.ಸೌಭಾಗ್ಯ ನಿರೂಪಿಸಿದರು.