ಮಡಿಕೇರಿ, ಮಾ. 10: ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 5 ವಾಹನ ಚಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ವರ್ಗವಾರು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಹಾಗೂ ಸದಸ್ಯ ಕಾರ್ಯದರ್ಶಿಗಳು, ವಾಹನ ಚಾಲಕರ ನೇಮಕಾತಿ ಸಮಿತಿ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವದೇ ರೀತಿಯ ಆಕ್ಷೇಪಣೆ ಇದ್ದಲ್ಲಿ 7 ದಿನದೊಳಗೆ ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಯವರು ಹಾಗೂ ಅಧ್ಯಕ್ಷರು, ವಾಹನ ಚಾಲಕರ ನೇಮಕಾತಿ ಸಮಿತಿ, ಕೊಡಗು ಜಿಲ್ಲೆ, ಮಡಿಕೇರಿ ಅಥವಾ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಹಾಗೂ ಸದಸ್ಯ ಕಾರ್ಯದರ್ಶಿಗಳು, ವಾಹನ ಚಾಲಕರ ನೇಮಕಾತಿ ಸಮಿತಿ ಕೊಡಗು ಜಿಲ್ಲೆ, ಮಡಿಕೇರಿ ಈ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ವಾಹನ ಚಾಲಕರ ನೇಮಕಾತಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಡೆಪ್ಯೂಟಿ ಕಮೀಷನರ್ ಆಪ್ ಎಕ್ಸೈಜ್ ಅವರು ತಿಳಿಸಿದ್ದಾರೆ.