ಮಡಿಕೇರಿ, ಮಾ. 10: ಅಂಚೆ ಅದಾಲತ್‍ನ ಸಭೆಯು ತಾ. 11 ರಂದು (ಇಂದು) ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ಅಂಚೆ ಅದಾಲತ್ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಕಳುಹಿಸಲು ಕೋರಿದೆ.