ಗೋಣಿಕೊಪ್ಪಲು, ಮಾ. 10: ತಾಲೂಕು ಕಚೆÉೀರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ರೈತರ, ಕಾರ್ಮಿಕರ ಸಮಸ್ಯೆಗಳು ಬಗೆ ಹರಿಯುತ್ತಿಲ್ಲ. ದಲ್ಲಾಳಿಗಳ ಮೇಲೆ ನಿಗಾ ವಹಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನೂತನ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.

ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮುಂದಾಳತ್ವದಲ್ಲಿ ರೈತ ಮುಖಂಡರು ವೀರಾಜಪೇಟೆ ನೂತನ ತಹಶೀಲ್ದಾರ್ ಗೋವಿಂದ ರಾಜು ಬಿ.ಎಂ. ಅವರನ್ನು ಕಚೆÉೀರಿಯಲ್ಲಿ ಭೇಟಿ ಮಾಡಿ ರೈತರಿಗೆ ಸಂಬಂಧಪಟ್ಟ ಕಡತಗಳು ಅವಧಿ ಮೀರಿದ್ದರೂ ಇನ್ನೂ ಕೂಡ ಇತ್ಯರ್ಥವಾಗದಿರುವ ಬಗ್ಗೆ ಗಮನ ಸೆಳೆಯಲಾಯಿತು. ಕಚೆÉೀರಿಯಲ್ಲಿ ನಿರಂತರವಾಗಿ ಮಧ್ಯವರ್ತಿಗಳ ಹಾವಳಿಯಿಂದ ಜನತೆ ಬೇಸತ್ತಿದ್ದು ಇಂತಹವರನ್ನು ಕಚೇರಿಯತ್ತ ನುಸುಳದಂತೆ ಎಚ್ಚರವಹಿಸಬೇಕೆಂದು ಮನವಿ ಮಾಡಿದರು.

ಆದಷ್ಟು ಬೇಗನೇ ಬಡ ಜನತೆಯ, ರೈತರ ಕಡತಗಳನ್ನು ವಿಲೇವಾರಿ ಮಾಡಬೇಕು. ಭ್ರಷ್ಟಚಾರಕ್ಕೆ ಅವಕಾಶ ಕಲ್ಪಿಸಬಾರದು ಅಧಿಕಾರಿಗಳ ಹೆಸರಿನಲ್ಲಿ ದಂಧೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ರೈತ ಮುಖಂಡರು ಆದಷ್ಟು ಬೇಗನೇ ರೈತರೊಂದಿಗೆ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಿ ಆಯಾ ಭಾಗದ ಸಮಸ್ಯೆಗಳನ್ನು ಬಗೆ ಹರಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಇದೇ ಸಂದರ್ಭ ಒತ್ತಾಯಿಸ ಲಾಯಿತು. ಭೇಟಿಯ ಸಂದರ್ಭ ಮಾತನಾಡಿದ ನೂತನ ತಹಶೀಲ್ದಾರ್ ಬಿ.ಎಂ. ಗೋವಿಂದರಾಜ್ ಅವರು ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳನ್ನು ಮನಗಂಡಿದ್ದೇನೆ. ಆಡಳಿತದಲ್ಲಿ ಚುರುಕು ಮುಟ್ಟಿಸುವ ಕೆಲಸ ನಡೆಯುತ್ತಿದೆ. ದಲ್ಲಾಳಿಗಳ ನಿಯಂತ್ರಣಕ್ಕೆ ಕ್ರಮ ವಹಿಸ ಲಾಗುವದು. ಕಚೆÉೀರಿಗೆ ಆಗಮಿಸಿ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿ ಸಬೇಕು. ಅಗತ್ಯವಿದ್ದಲ್ಲಿ ತಹಶೀಲ್ದಾರ್ ಅವರನ್ನು ಭೇಟಿ ಮಾಡಬಹುದು ಎಂದರು. ಭೇಟಿಯ ಸಂದರ್ಭ ಕೊಡಗು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಕಾರ್ಯದರ್ಶಿ ಪುಚ್ಚಿ ಮಾಡ ಶುಭಾಶ್ ಸುಬ್ಬಯ್ಯ, ಅಮ್ಮತ್ತಿ ಹೋಬಳಿ ಸಂಚಾಲಕ ಮಂಡೇಪಂಡ ಪ್ರವೀಣ್, ಪೊನ್ನಂಪೇಟೆ ಹೋಬಳಿ ಸಂಚಾಲಕ ಆಲೇಮಾಡ ಮಂಜುನಾಥ್, ಉಪಾಧ್ಯಕ್ಷ ಹೆಚ್.ಜಿ. ಶಂಕರಪ್ಪ ಸೇರಿದಂತೆ ಕೋದೇಂಗಡ ಎನ್, ಸುರೆಶ್ ಚಂಗಪ್ಪ, ಮುಂತಾದವರು ಉಪಸ್ಥಿತರಿದ್ದರು.