ಮಡಿಕೇರಿ, ಮಾ. 10: ಇಂದು ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 39,015 ಮಕ್ಕಳ ಗುರಿ ಹೊಂದಿದ್ದು, ಒಟ್ಟಾರೆ 36,868 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶೇ. 94.50 ಗುರಿ ಸಾಧಿಸಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ 34,413 ಮಕ್ಕಳ ಗುರಿ ಹೊಂದಿದ್ದು, ಒಟ್ಟು 32,790 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶೇ. 95.28 ರಷ್ಟು ಗುರಿ ಸಾಧಿಸಲಾಗಿದೆ. ನಗರ ಪ್ರದೇಶದಲ್ಲಿ 4,602 ಮಕ್ಕಳ ಗುರಿ ಹೊಂದಿದ್ದು, ಒಟ್ಟು 4,078 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶೇ. 88.61 ರಷ್ಟು ಗುರಿ ಸಾಧಿಸಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಆಗಮಿಸಿರುವ ಪ್ರವಾಸಿಗರು, ಅಲೆಮಾರಿಗಳು ಒಟ್ಟು, 10,057 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ.

ಮಡಿಕೇರಿ ತಾಲೂಕಿನಲ್ಲಿ 10,592 ಮಕ್ಕಳ ಗುರಿ ಹೊಂದಿದ್ದು, ಒಟ್ಟಾರೆ ಶೇ. 91.65 ಗುರಿ ಸಾಧಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 8005 ಮಕ್ಕಳ ಗುರಿ ಹೊಂದಿದ್ದು, ಒಟ್ಟು 7,506 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಶೇ. 93.77 ರಷ್ಟು ಗುರಿ ಸಾಧಿಸಲಾಗಿದೆ. ನಗರ ಪ್ರದೇಶದಲ್ಲಿ 2,587 ಮಕ್ಕಳ ಗುರಿ ಹೊಂದಿದ್ದು, ಒಟ್ಟು 2,202 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶೇ. 85.12 ರಷ್ಟು ಗುರಿ ಸಾಧಿಸಿದೆ.

ಸೋಮವಾರಪೇಟೆ ತಾಲೂಕಿನಲ್ಲಿ 13,299 ಮಕ್ಕಳ ಗುರಿ ಹೊಂದಿದ್ದು, ಒಟ್ಟು ಶೇ. 97.28 ಗುರಿ ಸಾಧಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 12,941 ಮಕ್ಕಳ ಗುರಿ ಹೊಂದಿದ್ದು, ಒಟ್ಟು 12,523 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶೇ. 96.77 ರಷ್ಟು ಗುರಿ ಸಾಧಿಸಲಾಗಿದೆ. ನಗರ ಪ್ರದೇಶದಲ್ಲಿ 358 ಮಕ್ಕಳ ಗುರಿ ಹೊಂದಿದ್ದು, ಒಟ್ಟು 414 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶೇ. 115.64 ರಷ್ಟು ಗುರಿ ಸಾಧಿಸಿದೆ.

ವೀರಾಜಪೇಟೆ ತಾಲೂಕಿನ 15,124 ಮಕ್ಕಳ ಗುರಿ ಹೊಂದಿದ್ದು, ಒಟ್ಟಾರೆ ಶೇ. 94.04 ಗುರಿ ಸಾಧಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 13,467 ಮಕ್ಕಳ ಗುರಿ ಹೊಂದಿದ್ದು, ಒಟ್ಟು 12,761 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶೇ. 94.76 ರಷ್ಟು ಗುರಿ ಸಾಧಿಸಲಾಗಿದೆ. ನಗರ ಪ್ರದೇಶದಲ್ಲಿ 1,657 ಮಕ್ಕಳ ಗುರಿ ಹೊಂದಿದ್ದು, ಒಟ್ಟು 1,462 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶೇ. 88.23 ರಷ್ಟು ಗುರಿ ಸಾಧಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಕೇಂದ್ರದಲ್ಲಿ ಚಾಲನೆ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೊಲಿಯೋ ಹನಿ ಹಾಕಿಸುವ ಮೂಲಕ ಮಕ್ಕಳ ವಿಕಲತೆಯಿಂದ ದೂರ ಮಾಡಿ ಎಂದು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಕರೆ ನೀಡಿದ್ದಾರೆ.

ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಶಿಶುಗಳಿಗೆ ಪೊಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಮಾತನಾಡಿ ಜಿಲ್ಲೆಯಲ್ಲಿ ಐದು ವರ್ಷದೊಳಗಿನ 39,015 ಮಕ್ಕಳು ಇದ್ದು, ಇವರಲ್ಲಿ 4,602 ನಗರ ಮತ್ತು 34,413 ಗ್ರಾಮೀಣ ಪ್ರದೇಶದ ಮಕ್ಕಳಿದ್ದಾರೆ. ಇವರಲ್ಲಿ 2,662 ವಲಸಿಗ ಮಕ್ಕಳಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೊಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಾದ್ಯಂತ ಒಟ್ಟು 465 ಬೂತ್‍ಗಳನ್ನು ತೆರೆಯಲಾಗಿದೆ. ಅಲ್ಲದೆ 20 ಟ್ರಾನ್ಸಿಸ್ಟ್ ತಂಡಗಳು, 6 ಸಂಚಾರಿ ಲಸಿಕಾ ತಂಡಗಳನ್ನು ವ್ಯವಸ್ಥೆ ಮಾಡಲಾಗಿದೆ. 1,950 ಮಂದಿ ಲಸಿಕೆ ಹಾಕುವವರು, 87 ಮಂದಿ ಮೇಲ್ವಿಚಾರಕರು, 966 ಮನೆ ಮನೆಗೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದರು.

ತಾ. 11 ಮತ್ತು 12 ರಂದು ಬಿಟ್ಟು ಹೋದ 5 ವರ್ಷದೊಳಗಿನ ಮಕ್ಕಳಿಗೆ ಮನೆ ಮನೆ ಭೇಟಿ ನೀಡಿ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಡಾ.ಮೋಹನ್ ಅವರು ತಿಳಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಶ್ವಿನಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕುಲಕರ್ಣಿ, ರೋಟರಿ ಮಿಸ್ಟಿಹಿಲ್‍ನ ರವಿಶಂಕರ್, ಅಜಯ್ ಸೂದ್, ಮಾತಂಡ ಸುರೇಶ್ ಚಂಗಪ್ಪ, ಪಲ್ಸ್ ಪೊಲಿಯೋ ನೋಡಲ್ ಅಧಿಕಾರಿ ಡಾ. ರಮೇಶ್, ಆರ್‍ಸಿಎಚ್ ಅಧಿಕಾರಿ ಡಾ. ಆನಂದ್, ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಶಿವಕುಮಾರ್, ಡಾ. ಮಂಜುನಾಥ್, ಡಾ.ಪುರುಷೋತ್ತಮ, ಅಭಿಯಾನದ ವ್ಯವಸ್ಥಾಪಕ ದೇವರಾಜು, ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ದಿವಾಕರ ಇತರರು ಇದ್ದರು.