ಮಡಿಕೇರಿ, ಮಾ. 10: ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ಸಂಬಂಧ ಅರ್ಹ ಫಲಾನುಭವಿಗಳನ್ನು ಗುರುತಿಸಿ ವರದಿ ಸಲ್ಲಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಿಸಿದ್ದು, ಆ ಅಧಿಕಾರಿಗಳು ನೀಡಿದ ವರದಿ ಆಧಾರದಂತೆ ಮೊದಲ ಹಂತದಲ್ಲಿ ಪೂರ್ಣ, ತೀವ್ರ ಬಿದ್ದು ಹೋದ ಮನೆಗಳ ಸಂತ್ರಸ್ತರಿಗೆ ಜಿಲ್ಲಾಡಳಿತವು ಗುರುತಿಸಿರುವ ಪ್ರದೇಶಗಳಲ್ಲಿ; ಫಲಾನುಭವಿಗಳು ಆಯ್ಕೆ ಮಾಡಿಕೊಂಡಿರುವ ಪ್ರದೇಶದಲ್ಲಿ ಮನೆಗಳನ್ನು ನೀಡುವ ಸಂಬಂಧ 1 ರಿಂದ 4 ರವರೆಗೆ ಫಲಾನುಭವಿಗಳ ಪಟ್ಟಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಮತ್ತು ಜಿಲ್ಲಾ ವೆಬ್‍ಸೈಟ್ ಞoಜಚಿgu.ಟಿiಛಿ.iಟಿ ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ. ಎರಡನೇ ಹಂತದಲ್ಲಿ ವಾಸಕ್ಕೆ ಯೋಗ್ಯವಲ್ಲದ ಮನೆ, ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಸಂತ್ರಸ್ತರ ಪರಿಶೀಲನೆಯನ್ನು ನಡೆಸಲಾಗುತ್ತಿದ್ದು, ಪರಿಶೀಲನೆ ಮುಗಿದ ನಂತರ ಆ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಚುರ ಪಡಿಸಲಾಗುವದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.