ಚೆಟ್ಟಳ್ಳಿ, ಮಾ. 11: ಕೇಂದ್ರ ಸರಕಾರದ ಯೋಜನೆಗಳಲ್ಲೊಂದಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿ ಯೋಜನೆಯಡಿ ಚೆಟ್ಟಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಈರಳೆ ವಳಮುಡಿ ಗ್ರಾಮದಲ್ಲಿ ಸ್ಥಾಪಿತವಾದ ಟ್ರಾನ್ಸ್‍ಫಾರ್ಮರ್ ಹಾಗೂ ವಿದ್ಯುತ್ ಸಂಪರ್ಕವನ್ನು ತಾಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಉದ್ಘಾಟಿಸಿದರು.

ಈ ಸಂದರ್ಭ ಚೆಟ್ಟಳ್ಳಿ ಗ್ರಾಮಪಂಚಾಯಿತಿ ಸದಸ್ಯರಾದ ಬಲ್ಲಾರಂಡ ಕಂಠಿಕಾರ್ಯಪ್ಪ, ಪೊರಿಮಂಡ ಧನುದೇವಯ್ಯ, ಎನ್‍ಎಸ್‍ರವಿ, ಸ್ಥಳೀಯರಾದ ಅಡಿಕೇರ ಮುತ್ತಪ್ಪ,ಅಡಿಕೇರ ಹರೀಶ್ ಸ್ಥಳೀಯರು ಹಾಗೂ ಚೆಟ್ಟಳ್ಳಿ ವಿದ್ಯುತ್ ಇಲಾಖಾ ಸಿಬ್ಬಂದಿಗಳು ಭಾಗವಹಿಸಿದ್ದರು.