ಕುಶಾಲನಗರ, ಮಾ 11: ಸೋಮವಾರಪೇಟೆ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕರಾಗಿ ದಿನಕರ ಶೆಟ್ಟಿ ಅಧಿಕಾರ ವಹಿಸಿಕೊಂಡಿದ್ದಾರೆ. ಕುಶಾಲನಗರದಲ್ಲಿ ಕರ್ತವ್ಯದಲ್ಲಿದ್ದ ಮುರಳೀಧರ್ ಅವರು ಪುತ್ತೂರು ವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ. ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕರಾಗಿ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಿನೇಶ್ ಕುಮಾರ್ ಅವರನ್ನು ನೇಮಿಸಲಾಗಿದೆÉ.