ಸೋಮವಾರಪೇಟೆ, ಮಾ.11: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಯಾಗುತ್ತಿದ್ದಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಪಟ್ಟಣ ಸೇರಿದಂತೆ ಸುತ್ತಮುತ್ತಲ ಜನನಿಬಿಡ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದ ಪ್ರಚಾರ ಫಲಕಗಳನ್ನು ಮುಚ್ಚಲಾಯಿತು.
ಪಟ್ಟಣ ವ್ಯಾಪ್ತಿಯಲ್ಲಿ ಅಳವಡಿಸಲಾಗಿದ್ದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸುವ ಪ್ರಚಾರ ಫಲಕಗಳನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಪ್ಲಾಸ್ಟಿಕ್‍ನಿಂದ ಮುಚ್ಚಿದರು. ಇಲ್ಲಿನ ತಾಲೂಕು ಪಂಚಾಯಿತಿ, ತಾಲೂಕು ಕಚೇರಿ, ಶಾಸಕರ ಕಚೇರಿ ಸೇರಿದಂತೆ ಸುತ್ತಮುತ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಳವಡಿಸಲಾಗಿದ್ದ ಪ್ರಚಾರ ಫಲಕಗಳನ್ನೂ ಸಹ ಮುಚ್ಚಲಾಯಿತು.