ಕುಶಾಲನಗರ, ಮಾ. 11: ಮಕ್ಕಳ ಸಾಹಿತ್ಯ ಪರಿಷತ್‍ನ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ತೇಲಪಂಡ ಕವನ್ ಕಾರ್ಯಪ್ಪ ಆಯ್ಕೆ ಆಗಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಆಶ್ರಯದಲ್ಲಿ ಮಕ್ಕಳಲ್ಲಿನ ಸುಪ್ತ ಸಾಹಿತ್ಯ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಕಾರ್ಯಾಚರಿಸುತ್ತಿದ್ದು, ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷರಾಗಿ ಕವನ್ ಕಾರ್ಯಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಪರಿಷತ್‍ನ ಜಿಲ್ಲಾಧ್ಯಕ್ಷ ಎಂ.ಡಿ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.