ಮಡಿಕೇರಿ, ಮಾ. 11: ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ತಾ.14 ರಂದು ಪತ್ರಿಕಾ ಭವನದಲ್ಲಿ ಮಾಧ್ಯಮ ಕ್ಷೇತ್ರ ಮತ್ತು ಕಾನೂನು ವಿಷಯದ ಕುರಿತು ಮಹತ್ವದ ಕಾರ್ಯಾಗಾರ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಪ್ಪ ವಿ. ಮಲ್ಲಾಪುರ ಉದ್ಘಾಟಿಸಲಿದ್ದಾರೆಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಆರ್.ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯ ಸಿವಿಲ್ ನ್ಯಾಯಾಧೀಶರಾ ಗಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಅಧ್ಯಕ್ಷತೆಯಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಹಿಳೆ, ಮಕ್ಕಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಾನೂನು ವಿಷಯದ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಡಾ.ಡಿ.ಪಿ. ಸುಮನ್ ವಿಷಯ ಮಂಡಿಸಲಿದ್ದಾರೆ. ಅಪ್ರಾಪ್ತ ವಯಸ್ಕ ಮಕ್ಕಳು ಕಾನೂನು ವಿಷಯದ ಕುರಿತು ಕೊಡಗು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಅಜ್ಜಿಕುಟ್ಟೀರ ಸೂರಜ್, ಮಾನಹಾನಿ ವರದಿ ಕಾನೂನು ವಿಷಯದ ಕುರಿತು ಹಿರಿಯ ವಕೀಲ ಪಿ. ಕೃಷ್ಣಮೂರ್ತಿ ವಿಷಯ ಮಂಡಿಸಲಿದ್ದಾರೆ.
ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಕಾನೂನಿನ ಸ್ಪಷ್ಟ ಅರಿವು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ವೀರಾಜಪೇಟೆ ಕಾವೇರಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ.