ಸೋಮವಾರಪೇಟೆ,ಮಾ.11: ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾ.30ರಂದು ಶಾಂತಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಕ.ಸಾ.ಪ. ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಕ.ಸಾ.ಪ. ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು.
ರಾಜ್ಯದ ಹಿರಿಯ ಕವಿಗಳನ್ನು ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭಕ್ಕೆ ಆಹ್ವಾನಿಸುವದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.
ಸಮ್ಮೇಳನದ ಅಂಗವಾಗಿ ಸಾಂಸ್ಕøತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಭಾಗವಹಿಸುವ ತಂಡಗಳು ತಾ.20ರೊಳಗೆ ಮೊ. ಸಂಖ್ಯೆ 9481113951, 7676059263ರಲ್ಲಿ ಹೆಸರು ನೋಂದಾಯಿಸುವಂತೆ ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಸಿ.ಕೆ. ಶಿವಕುಮಾರ್ ಮನವಿ ಮಾಡಿದರು.
ಸಭೆಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಕ.ಸಾ.ಪ.ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ, ಕಾರ್ಯದರ್ಶಿ ಎಲ್.ಎಂ.ಪ್ರೇಮ, ಮಾಜಿ ಅಧ್ಯಕ್ಷ ಜವರಪ್ಪ, ಪದಾಧಿಕಾರಿಗಳಾದ ಎ.ಪಿ.ವೀರರಾಜು, ಕೆ.ಎ.ಆದಂ, ನಳಿನಿ ಗಣೇಶ್, ಚಂದ್ರಿಕಾ ಗಣಪತಿ, ರಾಣಿ ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.