ಗೋಣಿಕೊಪ್ಪ ವರದಿ, ಮಾ. 12: ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 19 ಫಲಾನುಭವಿಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಅಡುಗೆ ಅನಿಲ ವಿತರಣೆ ಮಾಡಿದರು.
ಈ ಸಂದರ್ಭ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಆದೇಂಗಡ ವಿನು ಚೆಂಗಪ್ಪ, ನಿರ್ದೇಶಕ ಕಿಲನ್ ಗಣಪತಿ, ಗೋಣಿಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸೆಲ್ವಿ ಉಪಸ್ಥಿತರಿದ್ದರು.