ಸೋಮವಾರಪೇಟೆ, ಮಾ.13: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಯಡೂರಿನ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಖಾತ್ರಿ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾ. 14ರಂದು(ಇಂದು) ಬೆಳಿಗ್ಗೆ 10 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ‘ಪತ್ರಿಕೋದ್ಯಮದಲ್ಲಿ ಯುವ ಜನಾಂಗದ ಪಾತ್ರ’ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಲಿದೆ.

ಕಾರ್ಯಕ್ರಮವನ್ನು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್. ಹರೀಶ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಪ್ರೊ. ಶ್ರೀಧರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಎ. ಮುರಳೀಧರ್, ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಚಾಲಕ ಎಂ.ಎಸ್. ಶಿವಮೂರ್ತಿ, ಇತಿಹಾಸ ಸಂಘದ ಅಧ್ಯಕ್ಷ ಎಂ.ಎಸ್. ಸುನಿಲ್ ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಚಿಕ್ಕ ಅಳುವಾರ ಜ್ಞಾನ ಕಾವೇರಿ ಸ್ನಾತಕ್ಕೋತ್ತರ ಕೇಂದ್ರದ ಕನ್ನಡ ಉಪನ್ಯಾಸಕ ಜಮೀರ್ ಅಹಮದ್, ಛಾಯಾ ಚಿತ್ರಗಾರ ಹಾಗೂ ಜಿಲ್ಲಾ ಕನ್ನಡಪ್ರಭ ವರದಿಗಾರ ವಿಘ್ನೇಶ್ ಎಂ. ಭೂತನಕಾಡು ಹಾಗೂ ಸುಂಟಿಕೊಪ್ಪದ ಚುಟುಕು ಸಾಹಿತಿ ವಹೀದ್ ಜಾನ್ ಪಾಲ್ಗೊಳ್ಳಲಿದ್ದಾರೆ.