ಕುಶಾಲನಗರ, ಮಾ. 12: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು.
ಕೇಂದ್ರ ಸರ್ಕಾರದ ಸಾಧನೆÀಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ನಡೆದ ಜಾಥಾಕ್ಕೆ ಸ್ಥಳೀಯ ಬಲಮುರಿ ದೇವಾಲಯ ಬಳಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ಜಾಥಾದಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ನಗರ ಬಿಜೆಪಿ ಪ್ರಮುಖರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿದ ರ್ಯಾಲಿ ಸ್ಥಳೀಯ ಕಾರು ನಿಲ್ದಾಣದಲ್ಲಿ ಸಮಾಪನಗೊಂಡಿತು.