ಮಡಿಕೇರಿ, ಮಾ. 13: ಕೊಡಗು ಜಿಲ್ಲೆಯ ಮಾಜಿ ಸೈನಿಕರ ಹಾಗೂ ಅವರ ಅವಲಂಬಿತರ ಕುಂದು ಕೊರತೆಗಳ ಬಗ್ಗೆ ಚರ್ಚಿಸುವ ಸಲುವಾಗಿ ತಾ. 15ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಸಭೆಯನ್ನು ಕಾರಣಾಂತರದಿಂದ ಮುಂದೂಡ ಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ ಅವರು ಕೋರಿದ್ದಾರೆ.