ಗೋಣಿಕೊಪ್ಪಲು, ಮಾ. 12: ಜೆ.ಸಿ.ಐ. ಪೊನ್ನಂಪೇಟೆ ಗೋಲ್ಡನ್ ವತಿಯಿಂದ ತಾ. 13 ರಂದು (ಇಂದು) ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದಲ್ಲಿ ರಕ್ತದಾನ ಶಿಬಿರವನ್ನು ನಡೆಸಲಾಗುವದು ಎಂದು ಅಧ್ಯಕ್ಷೆ ಕೊಣಿಯಂಡ ಕಾವ್ಯ ಸೋಮಯ್ಯ ತಿಳಿಸಿದ್ದಾರೆ.
ರಕ್ತದಾನ ಮಹಾದಾನ ಎಂಬ ಸಂದೇಶವನ್ನು ಹೊತ್ತು ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಅರಣ್ಯ ಮಹಾ ವಿದ್ಯಾಲಯದ ಎನ್.ಎಸ್.ಎಸ್. ಶಿಬಿರಾರ್ಥಿಗಳ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಲು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜೆ.ಸಿ. ಕಾವ್ಯ ಸೋಮಯ್ಯ 9480085060, ಕಾರ್ಯಕ್ರಮ ಸಂಯೋಜಕರಾದ ಜೆ.ಸಿ. ಪುನಿತ 9480774528 ರವರನ್ನು ಸಂಪರ್ಕಿಸಬಹುದಾಗಿದೆ.