ವೀರಾಜಪೇಟೆ, ಮಾ. 12: ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆಯಲು ಅನುವಾಗಲಿ ಎಂದು ಅನೇಕ ಉತ್ತಮ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಜೊತೆಗೆ ವಿದ್ಯಾರ್ಥಿಗಳು ಸಹ ಇದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು. ಅಲ್ಲದೆ ಪ್ರ್ರತಿ ವಿದ್ಯಾರ್ಥಿಯೂ ತಪ್ಪದೆ ಶಾಲೆಗೆ ಹಾಜರಾಗಬೇಕು ಏಕೆಂದರೆ ಹಾಜರಾತಿಯೂ ಅತಿ ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಶಿಕ್ಷಣ ನಿರ್ದೇಶಕ ಮಚ್ಚಾಡೋ ಹೇಳಿದರು.
ಸಂತ ಅನ್ನಮ್ಮ ಶಾಲಾ ಆವರಣದಲ್ಲಿ ನಡೆದ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ತಪ್ಪದೆ ಶಾಲೆಗೆ ಬರಬೇಕು ಕಲಿಕೆಗೆ ಯಾವ ತೊಂದರೆ ಆಗಬಾರದೆಂದು ಸರಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಪ್ರೋತ್ಸಾಹ ನೀಡಿದೆ. ಆದರಿಂದ ಇದರ ಸದುಪಯೋಗ ಪಡೆದು ಕಲಿಕೆಯಲ್ಲಿ ನಿರಂತರವಾಗಿ ತೊಡಗಿಸಿ ಕೊಂಡು ಭವಿಷ್ಯ ರೂಪಿಸಿಕೊಳ್ಳಿ.
ಇಂದು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದೆವೆ. ಅದೇ ರೀತಿ ದೈಹಿಕವಾಗಿ ಬಲಿಷ್ಟವಾಗಲು ಕ್ರೀಡೆ ಸಹಕಾರಿಯಾಗುತ್ತದೆ. ಕ್ರೀಡೆಯೂ ಮಾನಸಿಕ ಬಲ ತರುತ್ತದೆ ಹೊಸ ಚೇತನಗಳನ್ನು ತರುತ್ತದೆ. ಸೈಕಲ್ ತುಳಿದು ಶಾಲೆಗೆ ಬಂದರೆ ಅದು ಒಂದು ಉತ್ತಮ ವ್ಯಾಯಾಮವೇ ಆಗುತ್ತದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪ.ಪಂ. ಸದಸ್ಯೆ ಆಶಾ ಸುಬ್ಬಯ್ಯ, ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಾರ್ಗರೇಟ್ ಲಾರ್ಸದೊ, ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಜೋಕಿಂ, ಪ್ರಾಥಮಿಕ ಶಾಲಾ ಶಿಕ್ಷಣದ ಮುಖ್ಯ ಶಿಕ್ಷಕಿ ಸಿಸ್ಟರ್ ಜಾನೇಟ್, ಆಂಗ್ಲ ಮಾಧ್ಯಮದ ಮುಖ್ಯ ಶಿಕ್ಷಕಿ ಅನ್ನಮೇರಿ, ವೀರಾಜಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೋಹಿತ್, ರಾಜ್ಯ ಶಿಕ್ಷಕರ ಸಂಘದ ನಿರ್ದೇಶಕ ಸುಬ್ರಮಣಿ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಸಂತ ಅನ್ನಮ್ಮ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕ ಹಾಗೂ ಧರ್ಮಗುರುಗಳಾದ ಮದುಲೈಮುತ್ತು ವಹಿಸಿದ್ದರು.
ದೈಹಿಕ ಶಿಕ್ಷಕ ಜೀವನ್ ಲೋಬೊ, ಶಿಕ್ಷಕರಾದ ಜಪ್ರೀ ಡಿಸ್ವಿಲ್ವ ಮತ್ತು ಸುನಂದ ಉಪಸ್ಥಿತರಿದ್ದರು. ಈ ಸಂದರ್ಭ 184 ಸೈಕಲ್ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.