ಮಡಿಕೇರಿ, ಮಾ. 13: ನ್ಯಾಯಾಲಯದ ಆದೇಶದಂತೆ ದಕ್ಷಿಣ ಕೊಡಗಿನಿಂದ ಮೈಸೂರು ಜಿಲ್ಲೆಯನ್ನು ಸಂಪರ್ಕಿಸುವ ತಿತಿಮತಿ- ಆನೆಚೌಕೂರು ಹೆದ್ದಾರಿಯಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗುತ್ತಿದೆ.

ಅರಣ್ಯದೊಳಗೆ ಹಾದು ಹೋಗುವ ಈ ಹೆದ್ದಾರಿಯಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸುವಂತೆ ನ್ಯಾಯಾಲಯ ನೀಡಿದ ಆದೇಶದನ್ವಯ ಇದೀಗ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಹತ್ತು ಉಬ್ಬುಗಳನ್ನು ಅಳವಡಿಸಲಾಗಿದ್ದು, ಇನ್ನೂ ಹತ್ತು ಉಬ್ಬುಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಹೆದ್ದಾರಿಯಲ್ಲಿ ಉಬ್ಬುಗಳನ್ನು ನಿರ್ಮಿಸುತ್ತಿರುವದರಿಂದ ರೋಗಿಗಳು ಹಾಗೂ ಪ್ರಯಾಣಿಕರ ಸಂಚಾರಕ್ಕೆ ಅಡಚಣೆಯಾಗಲಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

-ಶ್ರೀಧರ್ ನೆಲ್ಲಿತ್ತಾಯ.