ನಾಪೋಕ್ಲು, ಮಾ. 12: ನರಿಯಂದಡ ಗ್ರಾಮ ಪಂಚಾಯಿತಿಯ ಕರಡ ಗ್ರಾಮದಲ್ಲಿ ಕೋಳಿಯಾರೆಯಿಂದ ಕ್ಲಬ್ ಮಹೀಂದ್ರ ಕರಡಕ್ಕೆ ಹೋಗುವ ನೂತನ ರಸ್ತೆಯನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ನೆರೆಯಂಡಮ್ಮಂಡ ಉಮಾಪ್ರಭು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿಳಿಯಂಡ್ರ ಶರಣು ರತೀಶ್, ಕೋಡಿರ ಪ್ರಸನ್ನ ತಮ್ಮಯ್ಯ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.